Ad Widget

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ಸಂಸದ ಕ್ಯಾ. ಚೌಟ ಒತ್ತಾಯ

. . . . . . .

ಮಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಅತ್ಯಂತ ಹೇಯ ಕೃತ್ಯವಾಗಿದ್ದು, ಕರ್ನಾಟಕದ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಯನ್ನು ಅಲ್ತಾಫ್, ಸವೇರಾ ರಿಚರ್ಡ್ ಕಾರ್ಡೋಜಾ ಹಾಗೂ ಅವರ ಸಹಚರ ಆರೋಪಿಗಳು ಅಪಹರಿಸಿ ಮಾದಕ ದ್ರವ್ಯ ನೀಡಿ ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದು, ಇಂತಹ ವಿಕೃತ ಕೃತ್ಯ ಖಂಡನೀಯ. ಈ ದುರುಳರ ಕೃತ್ಯದಿಂದ ರಾಜ್ಯವೇ ತಲೆತಗ್ಗಿಸುವಂತಾಗಿದ್ದು, ಕರಾವಳಿಯಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎನ್ನುವುದಕ್ಕೆ ಈ ಪ್ರಕರಣವೇ ಜ್ವಲಂತ ಸಾಕ್ಷಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದ್ದು, ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಹಾಗೂ ಅದರಿಂದ ರಾಷ್ಟ್ರೀಯ ಭದ್ರತೆಗೆ ಆತಂಕ ಸೃಷ್ಟಿಸಿ ಕಾನೂನು ವ್ಯವಸ್ಥೆಯನ್ನು ಬುಡುಮೇಲು ಮಾಡುತ್ತಿರುವ ಬಗ್ಗೆ ಇತ್ತೀಚೆಗೆ ಸಂಸತ್ತಿನಲ್ಲಿಯೂ ಧ್ವನಿಯೆತ್ತಿದ್ದು, ಇದನ್ನು ಮಟ್ಟ ಹಾಕಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸದನದಲ್ಲಿ ಮನವಿ ಮಾಡಿದ್ದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಹಿಂದೂ ಸಮಾಜದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂದಾಗಿದೆ. ಗೃಹ ಇಲಾಖೆ ಈ ಕೂಡಲೇ ಎಚ್ಚೆತ್ತುಕೊಂಡು ಕಾರ್ಕಳದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಗುರಿಪಡಿಸುವುದಕ್ಕೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!