
ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ಶಾಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಇಂದು ನಡೆಯಿತು. ಈ ವಿಜ್ಞಾನ ನಾಟಕ ಸ್ಪರ್ಧೆಯನ್ನು ಏಸುರಾಜ್ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಗಳು ಕುಕ್ಕೆ ಸುಬ್ರಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು.ಈ ಸಮಾರಂಭದ ವೇದಿಕೆಯಲ್ಲಿ ಶ್ರೀಮತಿ ಸಂಧ್ಯಾ ಕುಮಾರಿ ಶಿಕ್ಷಣ ಸಂಯೋಜಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಶ್ರೀಮತಿ ಭಾರತಿ ದಿನೇಶ್ ಅಧ್ಯಕ್ಷರು ಶಿಕ್ಷಕರ ರಕ್ಷಕ ಸಂಘ ಕುಮಾರಸ್ವಾಮಿ ವಿದ್ಯಾಲಯ, ಹಾಗೂ ಇಂದಿನ ನಾಟಕ ಸ್ಪರ್ಧೆಯ ತೀರ್ಪುಗಾರರಾದ ದುಗ್ಗಪ್ಪ ಗೌಡ ಕುಳ್ಳಂಪ್ಪಾಡಿ, ದಿನೇಶ್ ಕುಂದರ್, ವಸಂತ ಕೆ, ಶಾಲಾ ಸಂಚಾಲಕರು ಚಂದ್ರಶೇಖರ್ ನಾಯರ್, ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಉಮೇಶ್ ನಿರೂಪಿಸಿದರು.
ಸ್ಪರ್ಧೆಯಲ್ಲಿ ಸುಳ್ಯ ತಾಲೂಕಿನ ಐದು ಶಾಲೆಗಳು ಭಾಗವಹಿಸಿದ್ದು ಇದರಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ ದ್ವಿತೀಯ ರೋಟರಿ ಪ್ರೌಢಶಾಲೆ ಸುಳ್ಯ, ತೃತೀಯ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪಡೆದುಕೊಂಡಿತ್ತು.
