
ಸುಳ್ಯ ನಗರ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿಯ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ಬುದ್ಧ ನಾಯ್ಕ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷತೆ ಮತ್ತು ಉಪಾಧ್ಯಕ್ಷತೆಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.
ಕಳೆದ 15 ತಿಂಗಳುಗಳಿಂದ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಆಡಳಿತ ನಡೆದಿದ್ದು, ಇದೀಗ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯೊಂದಿಗೆ ಮತ್ತೊಮ್ಮೆ ಆಡಳಿತಕ್ಕೆ ವೇಗ ಸಿಗಲಿದೆ. ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕಲಾ ನೀರಬಿದರೆ ಮತ್ತು ಬುದ್ದನಾಯ್ಕ ಅವರನ್ನು ಸಂಸದರಾದ ಕ್ಯಾ. ಬೃಜೇಶ್ ಚೌಟ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ ಸೇರಿದಂತೆ ಪ್ರಮುಖರು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರು, ನಗರ ಪಂಚಾಯತ್ ಆಡಳಿತಾಧಿಕಾರಿ ಮಂಜುನಾಥ್ ಜಿ., ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್. ಉಪಸ್ಥಿತರಿದ್ದರು. ಸಹಾಯಕ ಚುನಾವಣಾ ಅಧಿಕಾರಿ ಚಂದ್ರಕಾಂತ್ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದರು.
