- Sunday
- April 20th, 2025

ಬಾಳಿಲದ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಜಂಟಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಬೋಧಿನೀ ಸ್ಕೌಟ್ಸ್ ಗೈಡ್ಸ್ ಬ್ಯಾಂಡ್ ವಾದನದ ಮೂಲಕ ಅತಿಥಿ ಅಭ್ಯಾಗತರನ್ನು ಬರಮಾಡಿಕೊಳ್ಳಲಾಯಿತು. ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಸಂಚಾಲಕರಾದ ಪಿ. ಜಿ. ಎಸ್. ಎನ್. ಪ್ರಸಾದ್ ನೆರವೇರಿಸಿ ಧ್ವಜ ಸಂದೇಶ ನೀಡಿದರು. ಬಳಿಕ ಎಲ್ಲಾ ವಿದ್ಯಾರ್ಥಿಗಳು...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೆರೆ ಸಮಿತಿಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ...

ಹರಿಹರ ಪಲ್ಲತ್ತಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9:00 ಗಂಟೆಗೆ ಸರಿಯಾಗಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತೀರ್ಥರಾಮ ಕಿರಿಭಾಗ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಂತರ ಗ್ರಾಮ ಪಂಚಾಯತ್ ಹಾಗೂ ವಿದ್ಯಾರ್ಥಿಗಳ ಪೋಷಕರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ನೀಡಲಾಯಿತು.ಶಾಲಾ ನಾಯಕಿ ಲಿಶ್ಮಿತಾ...

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಕೆ ನಾಗತೀರ್ಥ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಸ್ವಾತಂತ್ರೋತ್ಸವ ಮೆರವಣಿಗೆ ಮೂಲಕ ಭೇಟಿ ಕೊಟ್ಟರು ಹಾಗೂ ದೇಗುಲದಲ್ಲಿ ಭಜನೆ ಮಾಡಿ ತೀರ್ಥಪ್ರಸಾದ ಸ್ವೀಕರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ಡಾ.ದೇವಿಪ್ರಸಾದ್ ಕಾನತ್ತೂರ್ ರವರು ಎಲ್ಲರನ್ನೂ ಸ್ವಾಗತಿಸಿ ದೇವಳದ ವತಿಯಿಂದ ಸಿಹಿತಿಂಡಿ ವಿತರಿಸಿದರು. ಮೆರವಣಿಗೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ...

ಅರಂತೋಡು: 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾಲೇಜಿನ ಕ್ರೀಡಾಂಗಣದಲ್ಲಿ ದಿವಂಗತ ಭಾಸ್ಕರ್ ರೈ ಪೇರಾಜೆ ಕುಟುಂಬಸ್ಥರು ನೀಡಿದ ನೂತನ ಧ್ವಜ ಸ್ತಂಭದಲ್ಲಿ ಧ್ವಜಾರೋಹಣವನ್ನು ಪ್ರಭಾಕರ್ ರೈ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಭಾಗವಹಿಸಿ, ಮಾತನಾಡಿ ಸ್ವಾತಂತ್ರ್ಯದ ಮಹತ್ವ ಮತ್ತು ದೇಶದ ಪ್ರಜೆಗಳ ಕರ್ತವ್ಯಗಳನ್ನು ನೆನಪಿಸಿ ವಿದ್ಯಾರ್ಥಿಗಳಲ್ಲಿ ಸ್ಪೂರ್ತಿ...

ಸುಬ್ರಹ್ಮಣ್ಯ ಆಗಸ್ಟ್ 15: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾದ ಮೈಲಪ್ಪ ಸಂಕೇಶ್ ರವರು ಅಮರ ಮುಡ್ನೂರು ಗ್ರಾಮದ ಕುಂಟಿಕಾನ ಅಂಗನವಾಡಿಗೆ ಧ್ವಜ ಸ್ಥಂಭವನ್ನು ಕೊಡುಗೆಯಾಗಿ ನೀಡಿದರು. ತದನಂತರ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಜಿಲ್ಲೆ 31...

ಉಬರಡ್ಕ: ಉಬರಡ್ಕ ಗ್ರಾಮದ ಕಿಂಡಿ ಅಣೆಕಟ್ಟಿನಲ್ಲಿ ಕಳೆದ ಕೆಲವು ಸಮಯಗಳಿಂದ ಸುರಿಯುತ್ತಿದ್ದ ಮಳೆಗೆ ನೀರಿನಲ್ಲಿ ತೇಲಿಬಂದ ಮರದ ದಿಮ್ಮಿ, ಕಸ ತುಂಬಿ ನೀರಿನ ಹರಿವಿಕೆಗೆ ಸಮಸ್ಯೆಯಾಗುವುದನ್ನು ಮನಗಂಡು ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಪ್ರಶಂಸೆಗೆ ಪಾತ್ರರಾದರು. ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಚರ್ಚಿಸಿದ ಸ್ಥಳೀಯ ಯುವಕರ ತಂಡ ಮುಂಜಾನೆಯಿಂದಲೇ ಈ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ...

ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ ಸೂರು ಒದಗಿಸುವ ಸಂಕಲ್ಪ ಮಾಡುವ ಮೂಲಕ ಸ್ವಾತಂತ್ರ್ಯವನ್ನು ಅರ್ಥ ಪೂರ್ಣವಾಗಿ ಮಾಡಬೇಕು...

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದ್ವಜರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ ಇವರು ನೆರವೆರಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು,ನಿರ್ದೇಶಕರು, ಸಂಜೀವಿನಿ ಸಂಘದ ಸಿಬ್ಬಂದಿಗಳು ಹಾಗೂ ಸದಸ್ಯರು, ಪಶುಸಖಿ,...

All posts loaded
No more posts