- Monday
- April 21st, 2025

ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕಕ್ಕೆ 2 ಸಿಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವೀಕ್ ಮಡಪ್ಪಾಡಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್, ಪೂರ್ವಧ್ಯಕ್ಷರಾದ ಹರ್ಷೀತ್ ಜಿ.ಜೆ, ಶಾಲಾ ಶಿಕ್ಷಕಿಯರಾದ ಶ್ವೇತಾ ಪಿ, ಯೋಗಿನಿ ಯು, ಶಾಲಾ ವಿದ್ಯಾರ್ಥಿಗಳಾದ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾವಿನಕಟ್ಟೆ (ದೇವಚಳ್ಳ )ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತೆಯ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್ ತಳೂರು, ಸೇವಾ ಪ್ರತಿನಿಧಿಯಾದ ಶ್ರೀಮತಿ ಉಷಾಲತಾ, ಒಕ್ಕೂಟದ ಉಪಾಧ್ಯಕ್ಷರು, ಕಾರ್ಯದರ್ಶಿ, ಮತ್ತು ಸಂಘದ ಸದಸ್ಯರು ಭಾಗವಹಿಸಿದರು.

ಅಜ್ಜಾವರ : ಗಣೇಶೋತ್ಸವ ಸೇವಾ ಸಮಿತಿ ರಚನೆ – ಅಧ್ಯಕ್ಷರಾಗಿ ಗಿರಿಧರ ನಾರಾಲು, ಪ್ರಧಾನ ಕಾರ್ಯದರ್ಶಿಯಾಗಿ ಮೋಹಿತ್ ನಾರಾಲು
ಅಜ್ಜಾವರ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ 2024-25 ರ ಸಾಲಿನ ನೂತನ ಸಮಿತಿ ರಚನೆಯು ಇತ್ತೀಚೆಗೆ ಅಜ್ಜಾವರ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಿತು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಅಧ್ಯಕ್ಷರಾಗಿ ಗಿರಿಧರ ನಾರಾಲು, ಪ್ರಧಾನ ಕಾರ್ಯದರ್ಶಿಯಾಗಿ ಮೋಹಿತ್ ನಾರಾಲು ಆಯ್ಕೆಯಾದರು. ಪದಾಧಿಕಾರಿಗಳಾಗಿ ವಿನೋದ್ ಪಡ್ಡಂಬೈಲು , ರೂಪಾನಂದ ಕರ್ಲಪ್ಪಾಡಿ, ಲೋಕೇಶ್ ಮುಡೂರು, ಶಿವಾನಂದ...

ವಳಲಂಬೆ : ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ, ಹಣ್ಣಿನ ಗಿಡಗಳ ವಿತರಣೆ ಹಾಗೂ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ
ಗುತ್ತಿಗಾರು ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಪಂಜ ವಲಯ ಇದರ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಹಣ್ಣಿನ ಗಿಡಗಳ ವಿತರಣೆ ಮತ್ತು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆ.10 ರಂದು ವಳಲಂಬೆ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ವಲಯಾರಣ್ಯಾಧಿಕಾರಿ ಸಂತೋಷ ರೈ ನೆರವೇರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮದ ಅಧ್ಯಕ್ಷತೆ...

ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕೊಂದು ಡಿಕ್ಕಿಯಾಗಿ ಬೈಕ್ ಮತ್ತು ಜೀಪು ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಜೀಪಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಅಪಘಾತ ಸಂಭವಿಸಿದ ಪರಿಣಾಮವಾಗಿ ಜೀಪು ಪಲ್ಟಿಯಾಗಿದೆ. ಬೈಕ್ ಸವಾರ ಆಲೆಟ್ಟಿಯ ಕಂಟ್ರಾಕ್ಟರ್ ಶಶಿಧರನ್ ಎಂದು ತಿಳಿದು ಬಂದಿದೆ. ಗಾಯಗೊಂಡ ಬೈಕ್ ಸವಾರ ಹಾಗೂ...

ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕೊಂದು ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಜೀಪು ಪಲ್ಟಿಯಾಗಿ ಜೀಪಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಜೀಪಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಅಪಘಾತ ಸಂಭವಿಸಿದ ಪರಿಣಾಮವಾಗಿ ಜೀಪು ಪಲ್ಟಿಯಾಗಿದೆ. ಬೈಕ್ ಸವಾರ ಆಲೆಟ್ಟಿಯ ಕಂಟ್ರಾಕ್ಟರ್ ಶಶಿಧರನ್ ಎಂದು ತಿಳಿದು ಬಂದಿದ್ದು ಅವರನ್ನು ತಕ್ಷಣ...

ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು, ಪೂಜಾ ಕೈಂಕರ್ಯಗಳನ್ನು ಶ್ರೀ ಗೋಪಾಲಕೃಷ್ಣ ಭಟ್ ನೆರವೇರಿಸಿದರು, ನಾಗ ತಂಬಿಲ, ಹಾಲಿನ ಅಭಿಷೇಕ ವಿಶೇಷ ಪೂಜೆ ನಡೆದು ಪ್ರಸಾದ ವಿತರಿಸಲಾಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಮಂಡೆಕೋಲು ಗ್ರಾಮದ ಪೇರಾಲಿನ ಹರ್ಷಿತ್ ರವರಿಗೆ ಹಠಾತ್ ಬ್ರೈನ್ ಹ್ಯಾಮರೇಜ್ ಮೆದುಳಿನ ರಕ್ತ ಸ್ರಾವ ಉಂಟಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಸ್ಪತ್ರೆಯ ವೆಚ್ಚ ಸುಮಾರು ರೂ 7.50 ಲಕ್ಷದಷ್ಟು ತಗಲಬಹುದು ಎಂದು ವೈದ್ಯರು ತಿಳಿಸಿರುವ ಹಿನ್ನಲೆಯಲ್ಲಿ ಮನೆಯವರು ಆ ವೆಚ್ಚವನ್ನು ಭರಿಸಲು ಕಷ್ಟ ಸಾಧ್ಯವಾಗಿರುವುದೆಂದು ತಿಳಿಸಿರುವುದರಿಂದ ಸಮಾಜದ ಎಲ್ಲಾ ಬಂಧುಗಳು ತಮ್ಮ ಕೈಯಿಂದ ಸಾಧ್ಯವಾದಷ್ಟು...

ಮಡಪ್ಪಾಡಿ ಗ್ರಾಮದ ಬಾಳಿಕಳ ಬೂಡು ಶ್ರೀ ಉಳ್ಳಾಕುಲು ಹಾಗೂ ಪದ್ಮಾಂಬ ದೇವಿ ಸಂಬಂಧಿತ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿಯ ವಿಶೇಷ ನಾಗತಂಬಿಲ ಸೇವೆ ನಡೆಯಿತು.ವ್ಯಾಪ್ತಿಗೆ ಒಳಪಟ್ಟ ಭಕ್ತಾದಿಗಳು ಈ ತಂಬಿಲ ಸೇವೆಯಲ್ಲಿ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು.

All posts loaded
No more posts