
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಕಡಬ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಎಸ್‌ಎಸ್‌ಪಿಯು ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಬಾಲಕರ ವಿಭಾಗದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನಿಯಾಯಿತು.
ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಸೈಂಟ್ ಜೋಕಿಮ್ಸ್ ಕಡಬ ಪಡೆದುಕೊಂಡು ಅವಳಿ ದ್ವಿತೀಯ ಪುರಸ್ಕಾರವನ್ನು ತನ್ನದಾಗಿಸಿಕೊಂಡಿತು.ಬಾಲಕಿಯರ ವಿಭಾಗದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ತಪಸ್ಯಾ.ಎಸ್.ನಾಯಕ್ ಮತ್ತು ಸುಪ್ರೀಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.
ಸಮಾರೋಪ:
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ನಿವೃತ್ತ ಯೋಧ ಸುಬ್ರಹ್ಮಣ್ಯ ಎ.ಯು, ಕುಮಾರಸ್ವಾಮಿ ವಿದ್ಯಾಲಯದ ಪ್ರಾಂಶುಪಾಲ ಸಂಕೀರ್ತನ್ ಹೆಬ್ಬಾರ್,ಉಪನ್ಯಾಸಕಿ ಶ್ವೇತ.ಸಿ.ನಾಯಕ್, ರೋಟರಿ ಅಧ್ಯಕ್ಷ ಚಂದ್ರಶೇಖರ ನಾಯರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ತೀರ್ಪುಗಾರ ಸುಬ್ರಹ್ಮಣ್ಯ ನೂಚಿಲ ವಿಜೇತರಿಗೆ ಬಹುಮಾನ ವಿತರಿಸಿದರು.
