

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಜಿಲ್ಲಾ ಯೋಜನೆ “ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ” ವು ಆ.23 ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ನಡೆಯಿತು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋ.ವೆಂಕಟೇಶ್.ಹೆಚ್.ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಪ್ರೋ| ಡಾ.ಟಿ ಕೃಷ್ಣಮೂರ್ತಿ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಪ್ರಾಂಶುಪಾಲರಾದ ಡಾ| ದಿನೇಶ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ರೋ. ಚಂದ್ರಶೇಖರ ನಾಯರ್, ಕಾರ್ಯದರ್ಶಿ ಚಿದಾನಂದ ಕುಳ ಸೇರಿದಂತೆ ರೋಟರಿ ಕ್ಲಬ್ ನ ಸದಸ್ಯರು, ಕೆ.ಎಸ್.ಎಸ್ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.