Ad Widget

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರಿಗೆ ಶಿಕ್ಷಕರ ದಿನಾಚರಣೆ ಸಲುವಾಗಿ ನುಡಿನಮನ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ:5-09-2024ರಂದು ಡಾ. ಸರ್ವಪಲ್ಲಿರಾಧಾಕೃಷ್ಣನ್‌ಅವರ ಹುಟ್ಟು ಹಬ್ಬದ ಪ್ರಯುಕ್ತ ಆಚರಿಸಲಾಗುವ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್‌ಯು.ಜೆ.ಯವರು
ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರಿಗೆ ನುಡಿನಮನ ಸಲ್ಲಿಸಿದರು ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಶುಭಾಶಯಕೋರಿದರು ಹಾಗೂ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭವಿಷ್ಯಉಜ್ವಲವಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಮಾತನಾಡಿಜೀವನದ ಪಾಠವನ್ನು ಕಲಿಸಿಕೊಡುವ ಶಿಕ್ಷಕರಿಗೆ ಇದೊಂದು ಬಹುಮುಖ್ಯ ದಿನವೆಂದು ಶಿಕ್ಷಕರ ದಿನಾಚರಣೆಯ ಶುಭಾಶಯವನ್ನುಕೋರಿದರು. ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಹಾಗೂ ಉಪಪ್ರಾಂಶುಪಾಲರಾದಡಾ. ಶ್ರೀಧರ್ ಕೆ. ಅವರು ಮಾತನಾಡಿಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದು ಇವರು ಶಿಕ್ಷಣ ಕ್ಷೇತ್ರಕ್ಕೆಅಪಾರವಾದಕೊಡುಗೆಯನ್ನು ನೀಡಿದ್ದಾರೆಎಂದು ತಿಳಿಸಿ ಶಿಕ್ಷಕರಿಗೆ ಶುಭಾಶಯಕೋರಿದರು.ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡೀನ್‌ಗಳು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನಎಲ್ಲಾ ಬೋಧಕ ಮತ್ತು ಬೋಧಕೇತರಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading