Ad Widget

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ –

▪️ಅಧ್ಯಕ್ಷರಾಗಿ ಮಿರಾಝ್ ಸುಳ್ಯ
▪️ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ
▪️ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ

. . . . .

ಸುಳ್ಯ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು.

ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ, ಕೋಶಾಧಿಕಾರಿಯಾಗಿ ಸಿದ್ದೀಕ್ ಕೊಡಿಯಮ್ಮೆ, ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ, ಜೊತೆ ಕಾರ್ಯದರ್ಶಿಯಾಗಿ ಶಾಕಿರ್ ಪ್ಲಾಸ್ಟೂ ರವರು ಆಯ್ಕೆಯಾದರು.

ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ, ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ಕಲಾಂ, ಕಾರ್ಯದರ್ಶಿ ಶರೀಫ್ ನಿಂತಿಕಲ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!