Ad Widget

ಕುಕ್ಕೆ: ಸೆ.12 ರಂದು ಶ್ರೀ ದೇವಳದಲ್ಲಿ ನವಾನ್ನ ಪ್ರಸಾದ, ಕದಿರು ವಿತರಣೆ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಗುರುವಾರ ಹೊಸ್ತಾರೋಗಣೆ(ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತರಿಗೆ ಕದಿರು ವಿತರಣೆ ನಡೆಯಲಿದೆ.

ದರುಶನದಲ್ಲಿ ವ್ಯತ್ಯಯ: ಈ ದಿನ ಬೆಳಗ್ಗೆ 10 ಗಂಟೆಯ ನಂತರ ಶ್ರೀ ದೇವರ ದರುಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಅಲ್ಲದೆ ಆಶ್ಲೇಷ ಬಲಿ ಸೇವೆಯು ಬೆಳಗ್ಗೆ 9 ಗಂಟೆಯ ನಂತರ 2 ಪಾಳಿಯಲ್ಲಿ ನಡೆಯಲಿದೆ. ಭಕ್ತಾಧಿಗಳು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!