ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಸುಬ್ರಹ್ಮಣ್ಯ ಜಂಟಿ ಆಶ್ರಯದಲ್ಲಿ ಸೆ 12ರಂದು ಮಿಯವಕಿ ಮೆಥಡ್ ಆಫ್ ಎ ಫಾರೆಸ್ಟ್ ಸ್ಟೇಷನ್ ಇದರ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಉಡುಪಿ ಕಟಪಾಡಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಪರಿಸರವಾದಿ ಕೆ. ಮಹೇಶ್ ಶೆಣೈ ಪಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರು ಸದಸ್ಯರು, ಸೀನಿಯರ್ ಚೇಂಬರ್ ಅಧ್ಯಕ್ಷರು, ಸದಸ್ಯರುಗಳು ಹಾಗೂ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಆರತಿ ಕೆ ಹಾಗೂ ಸುಮಿತ್ರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು 150ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟರು.
- Tuesday
- December 3rd, 2024