
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸುಳ್ಯ ತಾಲೂಕು ಹಾಗೂ ಕೆವಿಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು ಇವುಗಳ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ತ್ರೋಬಾಲ್ ಪಂದ್ಯಾಟ ಸೆ.13 ರಂದು ಕೆವಿಜಿ ಪ್ರೌಢಶಾಲೆಯಲ್ಲಿ ನಡೆಯಿತು .
ತ್ರೋಬಾಲ್ ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಶ್ರೀ ಆಶಾ ನಾಯಕ್ ರವರು ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ವಹಿಸಿದ್ದರು. ವೇದಿಕೆಯಲ್ಲಿ ಹರಿಹರ ಕ್ಲಸ್ಟರ್ ಸಿ.ಆರ್.ಪಿ ಶ್ರೀ ಕುಶಾಲಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಬೊಳಿಯಪ್ಪ ಪೈಕ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕಮಲಾಕ್ಷ ಮುಳ್ಳುಬಾಗಿಲು, ಶಾಲಾ ಮುಖ್ಯಗುರುಗಳಾದ ಶ್ರೀ ಸುರೇಶ್. ಪಿ.ಕೆ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯಿಂದ ಸಭಾ ಕಾರ್ಯಕ್ರಮ ಪ್ರಾರಂಭವಾಯಿತು. ನಾಡಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಸ್ವಾಗತಿಸಿ ಸಹ ಶಿಕ್ಷಕರಾದ ಶ್ರೀ ಲೋಕನಾಥ ಗೌಡ. ಪಿ ವಂದಿಸಿದರು. ಸಹ ಶಿಕ್ಷಕರಾದ ಶ್ರೀ ಕೆ.ಕೆ.ವೆಂಕಟ್ರಮಣ ರವರು ಕಾರ್ಯಕ್ರಮ ನಿರೂಪಿಸಿದರು.
ತ್ರೋಬಾಲ್ ಪಂದ್ಯಾಟದಲ್ಲಿ ಒಟ್ಟು 20 ತಂಡಗಳು ಭಾಗವಹಿಸಿ ಅಂತಿಮವಾಗಿ ಬಾಲಕರ ವಿಭಾಗದಲ್ಲಿ ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಪ್ರಥಮ ಹಾಗೂ ಸರ್ಕಾರಿ ಪ್ರೌಢಶಾಲೆ ಏನೇಕಲ್ಲು ದ್ವಿತೀಯ ಸ್ಥಾನ ಪಡೆದುಕೊಂಡರೆ ಬಾಲಕಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಪ್ರಥಮ ಸ್ಥಾನ ಪಡೆದುಕೊಂಡರೆ ಕೆ.ಪಿ.ಎಸ್ ಬೆಳ್ಳಾರೆಯವರು ದ್ವಿತೀಯ ಸ್ಥಾನ ಪಡೆದುಕೊಂಡರು. ಬಾಲಕ, ಬಾಲಕಿಯರ ವಿಭಾಗದಲ್ಲಿ ಒಟ್ಟು 6 ವೈಯಕ್ತಿಕ ಬಹುಮಾನಗಳನ್ನು ಪಡೆದುಕೊಂಡರು. ಜೊತೆಗೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಅಯ್ಕೆ ಪಂದ್ಯಾಟ ನಡೆಸಲಾಯಿತು. ಶಾಲಾ S.D.M.C, ಶಾಲಾ ಅಭಿವೃದ್ಧಿ ಸಮಿತಿ, ಪೋಷಕರು, ಹೆತ್ತವರು, ಹಿರಿಯ ವಿದ್ಯಾರ್ಥಿಗಳ ಹಾಗೂ ಊರವರ ಸಹಕಾರದಿಂದ ನಡೆದ ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಳದ ವತಿಯಿಂದ ಅನ್ನಪ್ರಸಾದವನ್ನು ಒದಗಿಸಲಾಯಿತು. ಬೆಳಗ್ಗಿನ ಲಘು ಉಪಹಾರದ ವ್ಯವಸ್ಥೆಯನ್ನು ಶಾಲಾ S.D.M.C ಅಧ್ಯಕ್ಷರಾದ ಶ್ರೀ ಬೊಳಿಯಪ್ಪ ಪೈಕರವರ ನೇತೃತ್ವದಲ್ಲಿ ನಡೆಸಲಾಯಿತು. ಸ್ಥಳೀಯ ವಿವಿಧ ಸಂಘ,ಸಂಸ್ಥೆಗಳ, ದಾನಿಗಳ ಸಹಯೋಗದಲ್ಲಿ ಕಾರ್ಯಕ್ರಮವು ನೆರವೇರಿತು.
