ಆಲೆಟ್ಟಿ ಗ್ರಾಮದ ಸಿರಿಕುರಳ್ ನಗರದಲ್ಲಿ ಸುಳ್ಯ ನಗರ ಪಂಚಾಯತ್ ಹಲವಾರು ವರ್ಷಗಳಿಂದ ಸುಳ್ಯ ಪಟ್ಟಣದ ತ್ಯಾಜ್ಯ ವಸ್ತುಗಳನ್ನು ತಂದು ಘಟಕದಲ್ಲಿ ಶೇಖರಣೆ ಮಾಡಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಇರುವುದರಿಂದ ಸಾಂಕ್ರಾಮಿಕ ರೋಗಗಳು ಮತ್ತು ದುರ್ವಾಸನೆಯಿಂದ ಪರಿಸರದ ಜನರಿಗೆ ಮತ್ತು ಮಕ್ಕಳಿಗೆ ವಾಸಮಾಡಲು ಕಷ್ಟಕರವಾದ ವಾತಾವರಣವನ್ನು ನಿರ್ಮಾಣ ಮಾಡಿದ ಕಾರಣ ಹಲವಾರು ಬಾರಿ ಸಂಬಂಧ ಪಟ್ಟ ಇಲಾಖಾಧಿಕಾರಿಗಳಿಗೆ ಮತ್ತು ಜನಪ್ರತಿನಿದಿಗಳ ಗಮನಕ್ಕೂ ತಂದರೂ ಯಾವುದೇ ಕ್ರಮಕೈಗೊಳ್ಳದ ಕಾರಣ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸಿ ಕಲ್ಲರ್ಪೆ ಸಿರಿಕುರಳ್ ಪರಿಸರದ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
- Sunday
- November 24th, 2024