ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಉದ್ದಕ್ಕೂ ಮಾನವ ಸರಪಳಿ ನಡೆಯಲಿದ್ದು ಸುಳ್ಯ ತಾಲೂಕಿನಲ್ಲಿ ಕನಕಮಜಲಿನ ಸಂಪಾಜೆ ವರೆಗೆ ಜನತೆ ಕೈ ಜೋಡಿಸುವ ಮೂಲಕ ಸಂವಿಧಾನದ ಮಹತ್ವ ಸಾರಿದರು.
ಸುಳ್ಯದ ಜ್ಯೋತಿ ಸರ್ಕಲ್ ಬಳಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ , ತಹಶೀಲ್ದಾರ್ ಎಂ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಮಾಜಿ ತಾ.ಪಂ.ಸದಸ್ಯರಾದ ಪಿ.ಸಿ.ಜಯರಾಮ, ಮಾಜಿ ಜಿ.ಪಂ. ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನ.ಪಂ.ಮಾಜಿ ಸದಸ್ಯರಾದ ಎಂ.ವೆಂಕಪ್ಪ ಗೌಡ ಹಾಗೂ ಜನಪ್ರತಿನಿಧಿಗಳು, ಆಧಿಕಾರಿ ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.