ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ಸೆ.15 ರಂದು ಕೊಲ್ಲಮೊಗ್ರು ದಲ್ಲಿ ಸಾಮಾಜಿಕ ಅರಣ್ಯೀಕರಣ ಯೋಜನೆ ಕಾರ್ಯಕ್ರಮದ ಅಂಗವಾಗಿ 500 ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಮಾಧವ ಚಾಂತಾಳ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡ ರವರು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಕೃಷ್ಣಪ್ಪ, ತಾಲೂಕು ಕೃಷಿ ಅಧಿಕಾರಿ ರಮೇಶ್, ಶೌರ್ಯ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಸತೀಶ್.ಟಿ.ಎನ್, ಲಕ್ಷ್ಮಣ, ತಾರಾ, ಹೇಮಂತ್ ಚಾಳೆಪ್ಪಾಡಿ, ಹೃತಿಕ್, ಅನಿತಾ, ಮಮತಾ ಕೊಂದಾಳ, ದೇವಕುಮಾರ, ಸುನಂದಾ ಗಡಿಕಲ್ಲು, ಯಶವಂತ, ಉಪಸ್ಥಿತರಿದ್ದರು.
ಸಂಯೋಜಕರಾದ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು.
- Wednesday
- November 27th, 2024