Ad Widget

ಬಾಳಿಲ: ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನಿ ವಿದ್ಯಾಸಂಸ್ಥೆಗಳು ಬಾಳಿಲ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸೆ.17ರಂದು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರುಗಿತು. ಈ ಪಂದ್ಯಾಟವನ್ನು ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪಾವನ ಜೋಗಿಬೆಟ್ಟು ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀಮತಿ ಸಂಧ್ಯಾಕುಮಾರಿ ಶಿಕ್ಷಣ ಸಂಯೋಜಕರು, ಸೂಪಿ ಪೆರಾಜೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ ಒನ್ ಇದರ ಅಧ್ಯಕ್ಷರು, ಶ್ರೀ ಧನಂಜಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸುಳ್ಯದ ಅಧ್ಯಕ್ಷರು,.ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಶೆಟ್ಟಿ, ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ತೀರ್ಪುಗಾರರಾದ  ಮೋಹನ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ನಾರಾಯಣ ಬಿ,  ಸುಭಾಶ್ಚಂದ್ರ ರೈ ತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ನಿತ್ಯಶ್ರೀ, ಸಾಯಿ ಸುನಿಷ್ಕ, ರಕ್ಷ ಆರ್ ಕೆ, ಶ್ರಾವ್ಯ ,ಛಾಯಾ ಇವರ ಪ್ರಾರ್ಥನೆ ನೆರವೇರಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ  ಯಶೋಧರ ನಾರಾಲು ಎಲ್ಲರನ್ನೂ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ ಎಸ್ ವಂದಿಸಿದರು. ಪ್ರೌಢಶಾಲಾ ಶಿಕ್ಷಕರಾದ ಲೋಕೇಶ್ ಬಿ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!