ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ, ವಕೀಲರ ಸಂಘ ಸುಳ್ಯ, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ,
ಇವುಗಳ ಸಂಯುಕ್ತ ಆಶ್ರಯದಲ್ಲಿ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಸೆಪ್ಟೆಂಬರ್ 23ರಂದು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯ ಇಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ.ಬಿ.ಮೋಹನ್ ಬಾಬು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ಇವರು ನೆರವೆರಿಸಲಿದ್ದಾರೆ. ಅಧ್ಯಕ್ಷತೆಯನ್ನು ರೋಟರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ರೊ.ಎಮ್ ಯೋಗಿತಾ ಗೋಪಿನಾಥ್ ವಹಿಸಲಿದ್ದಾರೆ, ಅತಿಥಿಗಳಾಗಿ ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ್ ಕೊಡ್ತುಗುಳಿ, ಸಹಾಯಕ ಸರಕಾರಿ ಅಭಿಯೋಜಕರಾದ ರಮೇಶ್ ಆರ್, ಸುಳ್ಯ ಪೊಲೀಸ್ ಠಾಣೆಯ ಉಪನಿರಿಕ್ಷಕರಾದ ಸರಸ್ವತಿ ಬಿ ಟಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೊ. ಪ್ರಭಾಕರನ್ ನಾಯರ್, ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶೋಭಾ ಬೊಮ್ಮೆಟ್ಟಿ, ಸಂಪನ್ಮೂಲ ವ್ಯಕ್ತಿಯಾಗಿ ಸಾವಿತ್ರಿ ಕಣೆಮರಡ್ಕ, ಗ್ರಂಥಾಲಯ ಮೇಲ್ವಿಚಾರಕರು ಮತ್ತು ಕಾರ್ಯದರ್ಶಿ, ಕರ್ನಾಟಕ ರಾಜ್ಯ ಗ್ರಂಥಾಲಯ ನೌಕರರ ಸಂಘ, ಇವರುಗಳು ಭಾಗವಹಿಸಲಿದ್ದಾರೆ.
- Tuesday
- December 3rd, 2024