Ad Widget

ಬಿಜೆಪಿ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ವಿನುತಾ ಪಾತಿಕಲ್ಲು ನೇಮಕ

ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲೆಯ ಅಸಂಘಟಿತ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ವಿನುತಾ ಪಾತಿಕಲ್ಲು ಅವರನ್ನು ನೇಮಕ ಮಾಡಲಾಗಿದೆ.

ಇವರು ಮಂಡೆಕೋಲು ಗ್ರಾಮದ ಹರಿಶ್ಚಂದ್ರ ಪಾತಿಕಲ್ಲು ಅವರ ಪತ್ನಿ. ಮಂಡೆಕೋಲು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕಿಯಾಗಿ , ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆಯಾಗಿ, ಮಂಡೆಕೋಲಿನ ವೀರವನಿತೆ ಕ್ರೀಡಾ ಮತ್ತು ಕಲಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ರೈತ ಮಹಿಳಾ ಸ್ವಸಹಾಯ ಸಂಘ ಮಂಡೆಕೋಲು ಇದರ ಸ್ಥಾಪಕ ಅಧ್ಯಕ್ಷರಾಗಿ, ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಮಹಿಳಾ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!