ಒಬ್ಬ ಮಗು ಉತ್ತಮ ಪ್ರಜೆಯಾಗಿ ರೂಪಿಸಲು ,ಪೋಷಕರು ಶಿಕ್ಷಕರು ಕೆತ್ತನೆಯ ಶಿಲ್ಪಿಗಳಾಗಬೇಕು. ವಿದ್ಯಾರ್ಥಿ ಜೀವನದ ಮಾನದಂಡವಾದ ಅಂಕದ ಜತೆ ಗೆ ಸಂಸ್ಕೃತಿಯುತ-ಸಂಸ್ಕಾರಯುತ ವಾಗಿ ಮಕ್ಕಳನ್ನು ಬೆಳೆಸಲು ಪೋಷಕರು ಎಚ್ಚರಿಕೆಯ ಹೆಜ್ಜೆ ಇಡುವ ಅಗತ್ಯತೆ ಇದೆ ಎಂದು ಉಪನ್ಯಾಸಕಿ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಅನುರಾಧ ಕುರುಂಜಿ ಹೇಳಿದರು.
ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.
ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಅಬ್ದುಲ್ ಖಾದರ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ ಆರ್ ಇದ್ದರು. ಶಿಕ್ಷಕಿ ಮೀನಕುಮಾರಿ ಸಂಪನ್ಮೂಲ ವ್ಯಕ್ತಿ ಅವರನ್ನು ಪರಿಚಯಿಸಿದರು. ಶಿಕ್ಷಕಿ ಸವಿತಾ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ ಕೆ ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024