
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರು ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷರಾಗಿದ್ದ ಸರ್ವೆಯರ್ ಸಿಂಗಾರ ಶೆಟ್ಟಿಯವರು ಸುಳ್ಯದಿಂದ ವರ್ಗಾವಣೆಗೊಂಡಿರುವುದರಿಂದ ಅಧ್ಯಕ್ಷ ಸ್ಥಾನವನ್ನು ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀಮತಿ ಧನಲಕ್ಷ್ಮೀ ಕುದ್ದಾಜೆಯವರಿಗೆ ಪ್ರಭಾರ ವಹಿಸಲಾಗಿದೆ. ಆ ಮೂಲಕ ಸರಕಾರಿ ನೌಕರರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರೆಂಬ ಹಿರಿಮೆಗೂ ಇವರು ಪಾತ್ರರಾಗಿದ್ದಾರೆ.
ಇತ್ತೀಚೆಗೆ ನಡೆದ ಕಾರ್ಯಕಾರಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಧನಲಕ್ಷ್ಮೀ ಕುದ್ದಾಜೆಯವರು ಅಡ್ಪಂಗಾಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದು, ಸುಳ್ಯದಲ್ಲಿ ಶಿಕ್ಷಣ ಸಂಯೋಜಕರಾಗಿಯೂ ಪ್ರಭಾರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಟರಿ ಮತ್ತು ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರೀಯ ಸದಸ್ಯರಾಗಿದ್ದಾರೆ.
