
ಸುಳ್ಯದ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇಬ್ಬರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಂಧಿತರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್, ಮಿಥುನ್ ಎಂದು ತಿಳಿದು ಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಅವರಿಗೆ ನ್ಯಾಯಾಧೀಶರು 14 ದಿನಗಳ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.
