ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ೧೦೫ ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು.ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು ಅತ್ಯುತ್ತಮ ಕಾರ್ಯಕ್ರಮ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುಳ್ಯ ಅಧ್ಯಕ್ಢ ಶ್ರೀ ರಾಮಕ್ರಷ್ಣ ರೈ, ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀ ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮಕ್ಕೆ ಪ್ರಾಯೊಜಕರಾಗಿ ಧನಸಹಾಯ ಚೆಕ್ಕನ್ನು ತಾಲೂಕು ಅಧ್ಯಕ್ಷರಿಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಅಕಾಡೆಮಿ ಆಫ಼್ ಲಿಬರಲ್ ಎಜುಕೇಷನ್ ರಿ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಕೇಂದ್ರ ಸಾಹಿತ್ಯ ಪರಿಷತ್ ಸದಸ್ಯ ಡಾ ಮಾಧವ ಎಮ್ ಕೆ, ಹೋಬಳಿ ಘಟಕಗಳ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ , ಚಂದ್ರಾವತಿ ಬಡ್ಡಡ್ಕ, ಗೌರವ ಕಾರ್ಯದರ್ಶಿ ಚಂದ್ರಮತಿ ಕೆ, ಕೋಶಾಧಿಕಾರಿ ದಯಾನಂದ ಆಳ್ವ, ಜಿಲ್ಲಾ ಪ್ರತಿನಿಧಿ ಇವರು ಉಪಸ್ತಿತರಿದ್ದರು. ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿ ಶ್ರೀಮತಿ ಲತಾ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು, ತಾಲೂಕು ಸಾಹಿತ್ಯ ಪರಿಷತ್ತು, ಹಾಗೂ ಹೋಬಳಿ ಘಟಕದ ಪದಾಧಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.
- Thursday
- November 21st, 2024