- ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ.
ಇನ್ನು ಇತ್ತೀಚೆಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರದ ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಪೂರ್ಣವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕೂಡ ಹೇಳಿದ್ದರು.
ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಉದ್ದೇಶದಿಂದಾಗಿ ಪರಿಸರ ತಜ್ಞ ಮಾಧವ ಗಾಡ್ಗಿಲ್ ಎಂಬುವವರ ಅಧ್ಯಕ್ಷತೆಯಲ್ಲಿ ಕೆಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಅವರು 2011ರ ಆಗಸ್ಟ್ 31ರಂದು ಸರ್ಕಾರಕ್ಕೆ ತಮ್ಮ ವರದಿ ಸಲ್ಲಿಸಿದ್ದರು.
ಕಸ್ತೂರಿ ರಂಗನ್ ಸಮಿತಿ ವರದಿ ಹೀಗಿದೆ…
ಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿಮಿ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ ಎಂದು ಗುರುತಿಸಿದೆ. ಈ ಪ್ರದೇಶಗಳಲ್ಲಿ ಗಣಿಗಾರಿಕೆ, ಜಲವಿದ್ಯುತ್, ಕ್ವಾರಿ, ಮರಳುಗಾರಿಕೆ ಪರಿಸರ ವಿರೋಧಿ ಕೈಗಾರಿಕೆ, ಪವನ ವಿದ್ಯುತ್ ಯೋಜನೆಗಳನ್ನು ಸಂಪೂರ್ಣ ನಿಷೇಧಿಸಬೇಕು. 20,000 ಚ,ಮೀ, ಬೃಹತ್ ಆದ ಯಾವುದೇ ಕಟ್ಟಡ ನಿರ್ಮಿಸುವ ಹಾಗಿಲ್ಲ. ಇಎಸ್ಎನಿಂದ 10ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದಾದರೇ ಪರಿಸರ ಇಲಾಖೆ, ಸ್ಥಳೀಯ ಗ್ರಾಮಸಭೆ ಅನುಮತಿ ಪಡೆಯಬೇಕು. ಈ ಪ್ರದೇಶದಲ್ಲಿ ಸಿಮೆಂಟು, ಕಲ್ಲು, ರಸಾಯನಿಕ ಬಳಸಲು, ಜನವಸತಿ ನಿರ್ಮಿಸಲು ಯಾವುದೇ ಅವಕಾಶವಿಲ್ಲ.
ಒಂದು ವೇಳೆ ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಪಶ್ಚಿಮ ಘಟ್ಟ ಮತ್ತು ಮಲೆನಾಡು ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆ ಆಗುತ್ತದೆ. ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ ಹಾಗೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣದಿಂದ ಕೇಂದ್ರದ ಸುಪರ್ದಿಗೆ ಹೋಗುತ್ತದೆ. ಆಗ ಅಲ್ಲಿ ವಾಸಿಸುತ್ತಿರುವ ಆದಿವಾಸಿಗಳನ್ನು ಒಕ್ಕಲು ಎಬ್ಬಿಸಬೇಕಾಗುತ್ತದೆ. ಹಾಗಾಗಿ ಈ ಎಲ್ಲಾ ವಿಚಾರಗಳಿಂದ ಕಸ್ತೂರಿ ರಂಗನ್ ವರದಿಗೆ ಭಾರಿ ವಿರೋಧ ವ್ಯಕ್ತವಾಗಿತ್ತು.