
ಚೊಕ್ಕಾಡಿ ಹೈಸ್ಕೂಲ್ ಕುಕ್ಕುಜಡ್ಕದಲ್ಲಿ ಸೆ. 23 ರಂದು ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಚೊಕ್ಕಾಡಿ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಬಾಲಕ, ಬಾಲಕಿಯರು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
