ಸುಳ್ಯ ಕೋರ್ಟ್ ಹಿಂಭಾಗದಲ್ಲಿರುವ ವಿದ್ಯಾರ್ಥಿನಿ ನಿಲಯದಿಂದ ಕೊಳಚೆ ನೀರನ್ನು ರಸ್ತೆ ಪಕ್ಕದ ತೆರೆದ ಚರಂಡಿಗೆ ಬಿಡುತ್ತಿದ್ದಾರೆ. ಚರಂಡಿಯಲ್ಲಿ ನೀರು ಹರಿದು ಹೋಗದೇ ಸೊಳ್ಳೆ ಉತ್ಪತ್ತಿಯ ತಾಣವಾಗಿದೆ. ವಿದ್ಯಾರ್ಥಿನಿಯರಿಗೆ ಸ್ವಚ್ಛತೆಯ ಪಾಠ ಹೇಳಿಕೊಡಬೇಕಾದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಿಗೆ ಕೊಳಚೆ ನೀರನ್ನು ರಸ್ತೆಯ ಬದಿಗೆ ಬಿಡಬಾರದು ಎಂಬ ಸಾಮಾನ್ಯ ಜ್ಞಾನವಿಲ್ಲವೇ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ. ಚರಂಡಿಯಲ್ಲಿ ನೀರು ಶೇಖರಣೆಯಾಗಿ ದುರ್ನಾತ ಬೀರುತ್ತಿದ್ದು ಸಾಂಕ್ರಾಮಿಕ ರೋಗ ಹರಡಲು ಸಾಧ್ಯವಾಗಬಹುದಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆ ಎಚ್ಚೆತ್ತುಕೊಳ್ಳುವುದು ಉತ್ತಮ.
- Saturday
- November 23rd, 2024