- Sunday
- April 20th, 2025

ಸುಳ್ಯ ಯುವಜನ ಸಂಯುಕ್ತ ಮಂಡಳಿಯಿಂದ ತಾಲೂಕು ಮಟ್ಟದಲ್ಲಿ ಕೊಡಮಾಡುವ ೨೦೨೩-೨೪ನೇ ಸಾಲಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಗೆ ಸುಳ್ಯ ಕೇರ್ಪಳ ಪಯಸ್ವಿನಿ ಯುವಕ ಮಂಡಲ ಹಾಗೂ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿಗೆ ಮಯೂರಿ ಯುವತಿ ಮಂಡಲ ಚೊಕ್ಕಾಡಿ ಭಾಜನವಾಗಿದ್ದು ಸೆ.೧೪ರಂದು ನಡೆದ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ...

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಓಣಂ ಆಚರಣೆ ನಡೆಯಿತು. ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ಆಕರ್ಷಕ ಪೂಕಳಂ ರಚಿಸಿ, ತಿರುವಾದಿರ ನೃತ್ಯ ಪ್ರದರ್ಶನ ನೀಡಿದರು. ಬೆಳ್ಳಾರೆ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕಿ ಶಶಿಕಲಾ ದೀಪ ಬೆಳಗಿಸಿ ಶುಭಹಾರೈಸಿದರು. ಸಂಜೀವಿನಿ ಸಂಘದ ಮೇಲ್ವಿಚಾರಕಿ ಗೀತಾ ಪ್ರೇಮಚಂದ್ರ ಮುಖ್ಯಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿ ಶಿಕ್ಷಕಿ ಶ್ವೇತಾ ಓಣಂ ಆಚರಣೆಯ ಮಹತ್ವದ...

ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರ್ ಇದರ ವತಿಯಿಂದ ಪೆರ್ಲoಪಾಡಿಯಲ್ಲಿ ಶ್ರೀಗಣೇಶೋತ್ಸವದ ಆಚರಣೆಯಲ್ಲಿ ಜರುಗಿದ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ಸುಳ್ಯದ ಸಾಹಿತಿ, ಜ್ಯೋತಿಷಿ, ಕಲಾವಿದರಾದ ಶ್ರೀ ಎಚ್. ಭೀಮರಾವ್ ವಾಷ್ಠರ್ ಇವರ ವಿವಿಧ ಸಾಧನೆಗಳನ್ನು ಪರಿಗಣಿಸಿ 2024 ನೇ ಸಾಲಿನ ಕಲಾ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ...

ಸುಳ್ಯ ಕೆ.ಎಸ್.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ ಸಂಸ್ಥೆಯ ಗುತ್ತಿಗೆ ಅವಧಿ ಮುಗಿದ ಬಳಿಕ ಇನ್ನೊಂದು ಸಂಸ್ಥೆ ಪೂಜ್ಯಾಯ ಸೆಕ್ಯೂರಿಟಿ ಸರ್ವಿಸ್ ಸಂಸ್ಥೆಯವರು ಗುತ್ತಿಗೆ ಪಡೆದು ಇವರನ್ನು ನೇಮಿಸಿಕೊಂಡಿದ್ದರು. ಅವರು ನೇಮಿಸುವ ಸಂದರ್ಭದಲ್ಲಿ...

ಮಂಜೇಶ್ವರ: ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಶನಿವಾರ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು.ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರ ಪಡೆದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನ ಸಂಸ್ಕೃತ ಶಿಕ್ಷಕ ರಘು ಬಿಜೂರು ಅವರಿಗೆ ಅಭಿನಂದನಾ ಸಮಾರಂಭ ಶನಿವಾರ ನಡೆಯಿತು.ಕಾಲೇಜಿನ ಬೆಳ್ಳಿಹಬ್ಬ ಸಮಾರಂಭದಲ್ಲಿ ರಘು ಬಿಜೂರು ಅವರನ್ನು ಗೌರವಿಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವತಿಯಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿ...

ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಹಾಗೂ ಆಕ್ಸಿಸ್ ಬ್ಯಾಂಕ್ ಸಹಭಾಗಿತ್ವದಲ್ಲಿ ಕೊಡಮಾಡುವ ಸೇವಾ ರತ್ನ ಅವಾರ್ಡ್ ಗೆ ಅಜ್ಜಾವರ ಗ್ರಾಮದ ದೊಡ್ಡೇರಿ ನಿವಾಸಿ, ಉದ್ಯಮಿ ದಯಾನಂದ ಡಿ.ಕೆ. ಭಾಜನರಾಗಿದ್ದು, ಸೆ.13ರಂದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಜ್ಜಾವರ ಗ್ರಾಮದ ದೊಡ್ಡೇರಿ ಮುಳ್ಯ ಕ್ರಾಸ್ ಬಳಿ ಆರ್.ಕೆ. ಇಂಟರ್ನ್ಯಾಷನಲ್ ಹೋಲಿಡೆ ಆನ್ ಪಾಸ್ ಪೋರ್ಟ್, ವೀಸಾ...

ದಂತ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯ್ಯಾಪಕರಾಗಿ, ಸಹಸ್ರಾರು ವೈದ್ಯಕೀಯ ಲೇಖನಗಳ ಪತ್ರಿಕಾ ಅಂಕಣಕಾರರಾಗಿ, ಹತ್ತಾರು ವೈದ್ಯಕೀಯ ಜಾಗೃತಿ ಪುಸ್ತಕಗಳನ್ನು ಬರೆದು ಪ್ರಕಟಿಸಿ ವೈದ್ಯ ಸಾಹಿತಿಯೆಂದೆನಿಸಿ, ಸಾಹಿತ್ಯ, ಸಂಸ್ಕøತಿ, ಕಲೆ, ವೈದ್ಯಕೀಯ ಸೇವೆಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಹತ್ತು ಹಲವಾರು ಸಂಘ-ಸಂಸ್ಥೆಗಳಿಂದ ಸನ್ಮಾನ ಪಡೆದು ಒಂದು ದಶಕದಿಂದ ದ.ಕ.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಯಶಸ್ವೀ ಸೇವೆ ಸಲ್ಲಿಸಿ, ರಾಷ್ಟ್ರಪತಿಗಳಿಂದ...

ನಾಲ್ಕೂರು ಗ್ರಾಮದ ಹಾಲೆಮಜಲು ನಿವಾಸಿ, ಪ್ರಗತಿಪರ ಕೃಷಿಕ ಕೊಚ್ಚಿ ವೆಂಕಟ್ರಮಣ ಗೌಡರು ಸೆ.13 ರಂದು ನಿಧನರಾದರು. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು. ಕೆಲಸಮಯದಿಂದ ಅನಾರೋಗ್ಯದಿಂದಿದ್ದ ಅವರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇದರ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ, ದೈವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ, ಆಡಳಿತ ಮಂಡಳಿಯ ಸದಸ್ಯರಾಗಿ ಹಲವು ವರ್ಷಗಳ ಕಾಲ...

ಯಾವುದೇ ರೀತಿಯ ಗಾಯ ಅಥವಾ ಅಪಘಾತಗಳಾದಾಗ ತಕ್ಷಣವೇ ಘಾಸಿಗೊಳಗಾದವರಿಗೆ ನೀಡುವ ಪ್ರಾಥಮಿಕವಾದ ಸಹಾಯವನ್ನು ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ಇದಕ್ಕೆ ವಿಶೇಷವಾದ ತರಬೇತಿ ಅಥವಾ ಪೂರ್ವ ತಯಾರಿ ಅಗತ್ಯವಿಲ್ಲ. ಸಾಮಾನ್ಯ ಜ್ಞಾನವನ್ನು ಬಳಸಿಕೊಂಡು ಆ ಕ್ಷಣದಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ರೋಗಿಯ ಪ್ರಾಣವನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತದೆ. ವೈದ್ಯರ ಲಭ್ಯತೆ ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ...

All posts loaded
No more posts