ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಳ್ಯ ಮತ್ತು ಪಂಜ ಹೋಬಳಿ ಘಟಕಗಳ ಆಶ್ರಯದಲ್ಲಿ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯ ತಾಲೂಕಿನ 105 ಶಾಲೆಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಭಾವಚಿತ್ರ ವಿತರಣಾ ಕಾರ್ಯಕ್ರಮವು ನಡೆಯುತ್ತಿದ್ದು, ಅ.01 ರಂದು ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ನ 10 ಶಾಲೆಗಳಿಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
5 ಶಾಲೆಗಳಿಗೆ ಪ್ರಾಯೋಜಕರಾದ ಕು.ಸಿ ಲೋಕಯ್ಯ ರವರು ಹಾಗೂ 5 ಶಾಲೆಗಳಿಗೆ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಉಪಾಧ್ಯಕ್ಷರಾದ ಶೇಖರ್ ಅಂಬೆಕಲ್ಲು ಭಾವಚಿತ್ರಗಳನ್ನು ಹಸ್ತಾಂತರಿಸಿದರು. ವಕೀಲರಾದ ಪ್ರದೀಪ್.ಕೆ.ಎಲ್ ರವರು ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ, ಕೋಶಾಧಿಕಾರಿ ಪ್ರಭಾಕರ ಕಿರಿಭಾಗ, ತೇಜಸ್ವಿ ಕಡಪಳ, ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 28th, 2024