Ad Widget

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ


ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಶಾಲಾ ಶಿಕ್ಷಣ ( ಪದವಿಪೂರ್ವ) ಇಲಾಖೆ ಇವುಗಳ ಆಶ್ರಯದಲ್ಲಿ “ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಕ್ಟೋಬರ 03 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೊ.ಪಿಪಿ ಪಿಹೆಚ್ಎಪ್ ಪ್ರಭಾಕರನ್ ನಾಯರ್ ವಹಿಸಿ ,ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ತಾಲೂಕು ದೈಹಿಕ ಶಿಕ್ಷಣ ಸಂಯೋಜಕಿ ಶ್ರೀಮತಿ ಶಾಂತಿ ಪಿ , ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಶೇಡಿಕಜೆ, ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಉಪನ್ಯಾಸಕಿ ಶ್ರೀಮತಿ ಜ್ಯೋತ್ಸ್ನ ದಿನೇಶ್ ವಂದಿಸಿದರು. ವಿದ್ಯಾರ್ಥಿಗಳಾದ ಕು. ಯಶಸ್ವಿ ಪಿ ಭಟ್, ಕು. ಅವನಿ ಎನ್ , ಪ್ರಾರ್ಥಿಸಿದರು. ಉಪನ್ಯಾಸಕಿ ದೀಕ್ಷಿತಾ ಎ ಕಾರ್ಯಕ್ರಮ ನಿರೂಪಿಸಿದರು.
ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದರು,ಅರಂತೋಡು ನೆಹರು ಮೆಮೊರಿಯಲ್ ಪದವಿಪೂರ್ವ ಕಾಲೇಜಿನ ಬಾಲಕ ತಂಡ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading