

ಸುಬ್ರಹ್ಮಣ್ಯ ಅ.4: ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ ನವರಾತ್ರಿಯ ವಿಶೇಷ ದಿನದಂದು ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ಹುಲಿ ವೇಷವನ್ನು ಕಂಡು ಕಾರಿನಿಂದ ಇಳಿದರು.
ತಕ್ಷಣ ಸುಬ್ರಹ್ಮಣ್ಯದ ಖ್ಯಾತ ಫೋಟೋಗ್ರಾಫರ್ ಸಂತೋಷ್ ನುಚಿಲ ರವರು ರಕ್ಷಿತ್ ಪ್ರೇಮ್ ದಂಪತಿಗಳಿಗೆ ಹುಲಿ ವೇಷ ನರ್ತನವನ್ನು ವೀಕ್ಷಿಸಲು ವ್ಯವಸ್ಥೆ ಮಾಡಿದರು. ಹುಲಿ ವೇಷದಾರಿಗಳ ನರ್ತನವನ್ನು ಕಂಡು ತುಳಕಿತರಾದ ಹಾಗೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ರಕ್ಷಿತ್ ಪ್ರೇಮ್ ದಂಪತಿಗಳು ಎಲ್ಲಾ ವೇಷಧಾರಿಗಳಿಗೆ ಶುಭಾಶಯವನ್ನು ಕೋರಿದರು.