
ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರಿಗೆ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಮನವಿ ಮಾಡಿದ್ದಾರೆ. ಮನವಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಭರ್ತಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಶಹೀದ್ ಪಾರೆ ತಿಳಿಸಿದ್ದಾರೆ.
