ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರವನ್ನು ಏರ್ಪಡಿಸಲಾಯಿತು .
.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಈ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಪ್ರೌಢಶಾಲಾ ಎಲಿಮೆಲೆಯಲ್ಲಿ ಏರ್ಪಡಿಸಲಾಗಿದೆ. ಶಿಬಿರದಂದು ಜೆಸಿಐನ ವಲಯ ತರಬೇತುದಾರರಾದ ಪ್ರದೀಪ್ ಬಾಕಿಲ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನಾಯಕತ್ವ ಹಾಗೂ ಮಾನವೀಯ ಸಂಬಂಧಗಳ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತಿ ನೀಡಿದರು.
ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಎನ್ಎಸ್ಎಸ್ ಅಧಿಕಾರಿ ಹಾಗೂ ಉಪನ್ಯಾಸಕರುಗಳಾದ ಸೌಮ್ಯ, ಪೂರ್ಣಿಮಾ, ಶೃತಿ, ರಾಧಾಕೃಷ್ಣ ಚಿದ್ಗಲ್, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.
- Tuesday
- December 3rd, 2024