ಅರಂತೋಡು ಗ್ರಾಮದ ಅರಮನೆಗಯದಲಗಲಿ ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ರಾತ್ರ ನಡೆದಿದೆ.
ರಾತ್ರಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾರ್ ಅವರ ಮನೆಗೆ ಬರುತ್ತಿದ್ದಾಗ ಮರಕ್ಕೆ ಕಟ್ಟಿದ್ದ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು ಅವರ ಕೈಗೆ ಗಂಭೀರ ಏಟು ತಗುಲಿದೆ. ತೇಜುಮಾರ್ ಅವರು ರೋಪ್ ನಲ್ಲಿ
ನೇತಾಡಿಕೊಂಡು ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಚಂದ್ರಶೇಖರ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಮೂವರು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಭಾಗದ ಜನರ ಬೇಡಿಕೆಗೆ ಸ್ಪಂದಿಸದ ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆ ನಿರ್ಲಕ್ಷ್ಯ ದೋರಣೆಯ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.