ಪೆರಾಜೆ ಗ್ರಾಮದ ಪೆರುಮುಂಡ ಎಂಬಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಅ. 23 ರಂದು ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ಭಾಸ್ಕರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಷಿನ್ ಪಾಷ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ದೇಚಮ್ಮ ಇವರ ಸಮ್ಮುಖದಲ್ಲಿ ದಾಳಿ ನಡೆಸಿ ಪೆರಾಜೆಯ ಪೆರುಮುಂಡದ ಗಂಗಾಧರ ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ಜಿತನ್ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.