
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಇದರ ಆಶ್ರಯದಲ್ಲಿ ಅಕ್ಟೋಬರ್ 27ರಂದು ನಡೆದ 7ನೇ ವರ್ಷದ ಮುಕ್ತ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಶ್ರೀತ್ ಎ.ಸಿ ಅಮೆಮನೆ 9ರಿಂದ 10ವರ್ಷದ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಡಿಸಂಬರ್ ತಿಂಗಳು ಥ್ಯಾಂಲೆಂಡ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಚೇತನ್ ಅಮೆಮನೆ ಮತ್ತು ದಿವ್ಯ ಚೇತನ್ ಇವರ ಪುತ್ರ. ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯ ಯೋಗ ಶಿಕ್ಷಕರಾದ ಸಂತೋಷ್ ಮುಂಡಕಜೆ ಮತ್ತು ಪ್ರಶ್ವಿಜ ಸಂತೋಷ್ ಮಾರ್ಗದರ್ಶನ ನೀಡಿರುತ್ತಾರೆ.
