Ad Widget

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿl ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ದಿl ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಜನ್ಮದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿl ಇಂದಿರಾ ಗಾಂಧಿ ಪುಣ್ಯಸ್ಮರಣೆ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಜನ್ಮದಿನಾಚರಣೆ ಯನ್ನು ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀಮತಿ ಇಂದಿರಾ ಗಾಂಧಿಯವರು ಬಾಂಗ್ಲಾ ವಿಮೋಚನೆ ಮತ್ತು ಖಾಲಿಸ್ತಾನ್ ಹೋರಾಟದ ಸಂದರ್ಭದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡು ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಎಂದು ಸ್ಮರಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರ್ ಮಾತನಾಡಿ ಪ್ರಪಂಚದಲ್ಲಿಯೇ ಶ್ರೀಮತಿ ಇಂದಿರಾ ಗಾಂಧೀಯವರಂತಹ ಇನ್ನೊಬ್ಬರು ಪ್ರಧಾನಿ ಬಂದಿಲ್ಲ ಮತ್ತು ಮುಂದೆಯೂ ಅಸಾಧ್ಯ. ಭಾರತ ಆರ್ಥಿಕವಾಗಿ ಕಂಗೆಟ್ಟ ಸಂದರ್ಭದಲ್ಲಿ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮತ್ತು ಪಂಚವಾರ್ಷಿಕ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೋಯ್ಯಲು ಮಹತ್ತರ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.

. . . . . . .


ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಕೆ ಎಂ ಮುಸ್ತಫಾ ಮಾತನಾಡಿ ದೇಶದ ಉಕ್ಕಿನ ಮಹಿಳೆ ಎಂದು ಕರೆಸಿಕೊಂಡ ಇಂದಿರಾ ಗಾಂಧಿಯವರು 70ರ ದಶಕದಲ್ಲಿಯೇ ಜಗತ್ತಿನಾದ್ಯಂತ ತನ್ನ ಆಡಳಿತ ಶೈಲಿಯಿಂದ ಜನಪ್ರಿಯತೆಯನ್ನು ಗಳಿಸಿಕೊಂಡು ಭಾರತ ವಿಶ್ವದ ಪ್ರಮುಖ ರಾಷ್ಟ್ರವಾಗಿ ರೂಪುಗೊಳ್ಳಲು ಪ್ರಮುಖ ಕಾರ್ಯ ನಿರ್ವಹಿಸಿ, ದೇಶದ ಒಳಗಿನ ಸಮಸ್ಯೆಗಳಿಗೆ ನಿಷ್ಠುರವಾಗಿ ಮತ್ತು ಅಭಿವೃದ್ಧಿ ಪೂರಕವಾಗಿ ಕೆಲಸ ನೆರ್ವಹಿಸಿದ ನಾಯಕಿ ಯಾಗಿದ್ದಾರೆ ಎಂದು ಸ್ಮರಿಸಿದರು. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡ ಮಾತನಾಡಿ ಇಂದಿರಾ ಗಾಂಧಿ ಯನ್ನು ಸ್ಮರಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ ವಂದಿಸಿದರು. ಸಭೆಯಲ್ಲಿ ಗೋಕುಲ್ ದಾಸ್ ಸುಳ್ಯ, ಚೇತನ್ ಕಜೆಗದ್ದೆ, ರಂಜಿತ್ ರೈ ಮೇನಾಲ, ಧನುಷ್ ಕುಕ್ಕೇಟಿ, ಜುಬೆರ್ ಆರಂತೋಡು, ಅಬ್ಬಾಸ್ ಅಡ್ಪಂಗಾಯ, ಬಿ ಸಿ ಯಶೋಧರ, ಗಂಗಾಧರ್ ಮೇನಾಲ, ಜತ್ತಪ್ಪ ರೈ, ಮಧುಸೂಧನ ಬೂಡು, ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!