ಮಡಪ್ಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ , ಕಸ್ತೂರಿ ರಂಗನ್ ವರದಿಯ ವಿರುದ್ಧ , ಪಿಡಿಓ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.
ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿಯವರು ಭಾಗವಹಿಸಿ , ವರದಿಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆಯ ಸದಸ್ಯರಾದ ಚಂದ್ರಶೇಖರ ಬಾಳುಗೋಡು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎನ್. ಟಿ. ಹೊನ್ನಪ್ಪ, ಪೂರ್ವ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.