
ಪುತ್ತೂರಿನ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮೆಸ್ಕಾಂ ಸಹಕಾರದಿಂದ ವಿದ್ಯುತ್ ಕಂಬ ಹತ್ತುವ ತರಬೇತಿ ಕಾರ್ಯಕ್ರಮ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ರೈ ಉದ್ಘಾಟಿಸಿ ಮಾತನಾಡಿ ಮುಂದೆ ನಡೆಯುವ ನೇಮಕಾತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದ.ಕ.ಜಿಲ್ಲೆಯವರು ಆಯ್ಕೆಯಾಗಲಿ ಎಂದರು. ಸುಮಾರು 400 ಮಂದಿ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದಾರೆ.
