Ad Widget

ಬೇರೆ ರಾಜ್ಯದಲ್ಲಿ ನಡೆದ ಘಟನೆಯನ್ನು ಪುತ್ತೂರಿನ ಘಟನೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ – ಸಮಾಜದ ಸ್ವಾಸ್ತ್ಯ ಹಾಳು ಮಾಡುವವರ ವಿರುದ್ಧ ಎಚ್ಚರಿಕೆ ನೀಡಿದ ಪೋಲಿಸರು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗಿದ್ದು ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದ್ದು, ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ನ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಅಂತಹ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ

. . . . . . .

ಈ ರೀತಿಯ ಹಳೆಯ ವಿಡಿಯೋಗಳನ್ನು ಪೊಟೋಗಳನ್ನು ಅದರ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲಾತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!