Ad Widget

ಎಣ್ಮೂರು ಪ್ರೌಢಶಾಲೆಯಲ್ಲಿ ಸಾಹಿತ್ಯ ಸಂಭ್ರಮ ಉಪನ್ಯಾಸ

ಕನ್ನಡ ಭಾಷೆಗೆ ಅನೇಕ ಸವಾಲುಗಳಿವೆ. ಅದನ್ನು ನಾವೆಲ್ಲರೂ ಎದುರಿಸಿ ಕನ್ನಡ ಭಾಷೆ, ಸಾಹಿತ್ಯ ಪರಂಪರೆಯನ್ನು ಉಳಿಸಿ ಅದನ್ನು ಮುಂದಿನ ಜನಾಂಗಕ್ಕೆ ತಲಪಿಸುವುದು ನಮ್ಮೆಲ್ಲರ ಜವಾ ಬ್ದಾರಿಯಾಗಿದೆ. ಸಾಹಿತ್ಯ ಪರಿಷತ್ತಿನಂತಹ ಅನೇಕ ಸಂಸ್ಥೆಗಳು ಈ ಜವಾಬ್ದಾರಿಯನ್ನು ಹೊರಬೇಕು ಎಂದು ಖ್ಯಾತ ವಾಗ್ಮಿ ಚಿಂತಕ ದುರ್ಗಾಕುಮಾರ್ ನಾಯರ್ ಕೆರೆ ಅವರು ಕರೆ ಇತ್ತರು. ಅವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಂಘ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇದರ ಸಹಯೊಗದಲ್ಲಿ ನಡೆದ ಸುವರ್ಣ ಸಂಭ್ರಮ -5೦ ರ ಪ್ರಯುಕ್ತ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವವನ್ನು ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷರಾದ ಶ್ರೀ ಮೇದಪ್ಪ ಗೌಡ ಇವರು ದೀಪ ಬೆಳಗಿಸಿ ಉದ್ಗಾಟಿಸಿ ಶುಭ ಹಾರೈಸಿದರು. ಶಾಲೆಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರಗಳನ್ನು ಹೋಬಳಿ ಘಟಕ ಅಧ್ಯಕ್ಷ ಶ್ರೀ ಬಾಬು ಗೌಡ ಅಚ್ರಪ್ಪಾಡಿ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಕವಿತಾ ಡಿ ಎಮ್, ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಶ್ರೀ ಪ್ರಭಾಕರ ಕಿರಿಭಾಗ ಉಪಸ್ತಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ ವಿವಿದ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಎಣ್ಮೂರು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕನ್ನಡ ಗೀತ ಗಾಯನ ನಡೆಸಿ ಸುಶ್ರಾವ್ಯವಾಗಿ ಹಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರತಿನಿಧಿ ಶ್ರೀ ರಾಮಚಂದ್ರ ಪಳ್ಳತ್ತಡ್ಕ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕ ಶ್ರೀ. ಲಿಂಗಪ್ಪ ಬೆಳ್ಳಾರೆ ವಂದಿಸಿದರು. ಕನ್ನಡ ಸಂಘದ ಸಂಚಾಲಕಿ ಶ್ರೀಮತಿ ಉಷಾ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!