ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸ. ಊ. ಹಿ ಪ್ರಾ ಶಾಲೆಕೋಲ್ಚಾರು ಇದರ ಶಾಲಾಭಿವ್ರದ್ದಿ ಸಮಿತಿ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಕೋಲ್ಚಾರು ಶಾಲೆಯಲ್ಲಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಗಾಟಿಸಿ ಶಾಲಾ ಪೂರ್ವ ವಿದ್ಯಾರ್ಥಿ ಶ್ರೀ ಕ್ರಷ್ಣಪ್ಪ ಗೌಡ ಪರಮಂಡಲ ಇವರು ಶುಭ ಹಾರೈಸಿದರು. ಸಭೆಯ ಅದ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶಾಲಾ ಪಾಲನಾ ಸಮಿತಿ ಅಧ್ಯಕ್ಷ ಶ್ರೀ ಕರುಣಾಕರ ಹಾಸ್ಪಾರೆ ಹಾಗು ಶಾಲಾ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಸನ್ಮಾನಕ್ಕೆ ಉತ್ತರಿಸಿದರು. ವೇದಿಕೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಶ್ರೀಕೇಶವ ಸಿಏ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಗೆ ಸಾಹಿತ್ಯ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವ ಚಿತ್ರಗಳನ್ನು ಹಸ್ತಾಂತರಿಸಲಾಯಿತು. ಶಾಲಾ ಮುಖ್ಯ ಶಿಕ್ಢಕ ಚಿನ್ನಸ್ವಾಮಿ ಶೆಟ್ಟಿ ಇವರು ಎಲ್ಲರನ್ನು ಸ್ವಾಗತಿಸಿದರು. ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಳ್ಳತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಕಾರ್ಯಕ್ರಮವನ್ನು ಶ್ರೀಮತಿ ಚಂದ್ರಾವತಿ ಬಡ್ಡಡ್ಕ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕೊನೆಯಲ್ಲಿ ಖ್ಯಾತ ಗಾಯಕ ಭೀಮ ರಾವ್ ವಾಷ್ಟರ್ ಬಳಗದಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು.
- Tuesday
- December 3rd, 2024