ಪ್ರಾಥಮಿಕ ಮತ್ತು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕಾರ್ಯಾಗಾರ. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ವತಿಯಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮದ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಾಗಾರ ಸುಳ್ಯದ ಕನ್ನಡ ಭವನದಲ್ಲಿಇಂದು ನಡೆಯಿತು.ಕಾರ್ಯಾಗಾರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ.ಉದ್ಘಾಟಿಸಿದರು.ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರು ಅಂಬ್ಲಿನೊಗರು ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ಡಾ.ರಾಮಮೂರ್ತಿ ಕೆ., ಬಂಟ್ವಾಳದ ಎಸ್ ವಿ.ಎಸ್.ದೇವಳ ಪ.ಪೂ.ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ, ಸಜ್ಜನ ಪ್ರತಿಷ್ಠಾನದ ಕಾರ್ಯದರ್ಶಿ ಶರೀಫ್ ಜಟ್ಟಿಪಳ್ಳ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಗೌರವ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಸಾಪ ನಿರ್ದೇಶಕರುಗಳಾದ ಶ್ರೀಮತಿ ಶಶ್ಮಿ ಭಟ್ ಪ್ರಾರ್ಥಿಸಿದರು, ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಶ್ರೀಮತಿ ಸಾವಿತ್ರಿ ಕಣೆಮರಡ್ಕ ವಂದಿಸಿದರು. ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024