ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ಸಭೆ

ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು.

. . . . . . . . .

ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು..

. . . . . . .

ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಿ ಎಂದು ನುಡಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್ ಮಾತನಾಡಿ ನೂತನ ಸದಸ್ಯರಿಗೆ ಶುಭ ಹಾರೈಸಿ ಸಕ್ರೀಯ ಸದಸ್ಯತ್ವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ಇವರನ್ನು ಸುಳ್ಯ ನಗರ ಸಭೆ ಅಧ್ಯಕ್ಷೆಯಾದ ಹಿನ್ನಲೆಯಲ್ಲಿ ಗೌರವಿಸಲಾಯಿತು.

ವೇದಿಯಲ್ಲಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ. ಕೆ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಿಕಿತ ಶೆಟ್ಟಿ, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಬಬಿತ, ಜಿಲ್ಲಾ ಮಹಿಳಾ ಮೊರ್ಚಾ ಸುಳ್ಯ ಮಂಡಲ ಪ್ರಭಾರಿ ಯಶಸ್ವಿನಿ ಶಾಸ್ತ್ರಿ, ಜಿಲ್ಲಾ ಉಪಾಧ್ಯಕ್ಷೆ ಗುಣವತಿ ಕೊಲ್ಲಂತಡ್ಕ,ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಪುಷ್ಪಾ ಮೇದಪ್ಪ, ಹಿರಿಯ ಕಾರ್ಯಕರ್ತೆ ಆಶಾ ತಿಮ್ಮಪ್ಪ ಉಪಸ್ಥಿತರಿದ್ದರು.

ಸದಸ್ಯೆ ಹೇಮಾ ಮೋಹನ್ ದಾಸ್ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಶಶಿಕಲಾ ನಿರಬಿದಿರೆ ಸ್ವಾಗತಿಸಿ ಧನ್ಯವಾದವಿತ್ತರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading