ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಸಂಪೂರ್ಣ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರಾದ ಮಧುಸೂದನ್ ಸುಳ್ಯ ರವರು ತಿಳಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 21st, 2024