ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಬಾಳುಗೋಡು ವಿಶ್ವ ಯುವಕ ಮಂಡಲದ ಸಂಪೂರ್ಣ ಬೆಂಬಲವಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಯುವಕ ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Thursday
- November 14th, 2024