
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ದಿವಾಕರ ಮುಂಡಾಜೆ ರವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿ ನ.12 ರಂದು ಪೃಥ್ವಿಚಂದ್ರ ಮುಂಡಾಜೆ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಕ್ಷಿತ್ ಕಜೆಗದ್ದೆ ರವರು ಈ ಹಿಂದಿನ ಮಾತುಕತೆಯಂತೆ ನಾಮಪತ್ರ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದ್ದು, ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿ ಪೃಥ್ವಿಚಂದ್ರ ಮುಂಡಾಜೆ ರವರು ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.