
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಮ್ಯಾಟ್ರಿಕ್ಸ್ ಎಜುಕೇಶನ್ ಇನ್ಸ್ಟಿಟ್ಯೂಟ್ ನಲ್ಲಿ ನ.14ರಂದು ಮಕ್ಕಳ ದಿನಾಚರಣೆ ಆಚರಣೆಯನ್ನು ಸಂಭ್ರಮದಿಂದ ನಡೆಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿ ತಿಂಡಿ ಮತ್ತು ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಸಂಸ್ಥೆಯ ಪ್ರಾಚಾರ್ಯರು, ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೊನೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು