Ad Widget

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪೂರ್ವಾಹ್ನದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಅಪರಾಹ್ನ ಸಭಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ (ರಿ.) ನಾಲ್ಕೂರ್ ವತಿಯಿಂದ ‘ಸ್ವಚ್ಛ ಪರಿಸರ ‘ ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ತರಗತಿವಾರು ಪ್ರಥಮ, ದ್ವಿತೀಯ, ತೃತೀಯ ಬಂದವರಿಗೆ ₹100, ₹75, ₹50 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರದ ಕೊಡುಗೆಯನ್ನು ಹೊಂಬೆಳಕು ತಂಡದ ಸದಸ್ಯರು ನೀಡಿದರು. ಶಾಲಾ ವತಿಯಿಂದ 1ರಿಂದ 7ನೇ ತರಗತಿವರೆಗೆ ಲಿಂಬೆ ಚಮಚ ಓಟ, ಲಕ್ಕಿ ಗೇಮ್, ಗ್ಲಾಸಿಗೆ ನೀರು ತುಂಬಿಸುವುದು ಸ್ಪರ್ಧೆಗಳನ್ನು ಏರ್ಪಡಿಸಿ ತರಗತಿವಾರು ಪ್ರಥಮ, ದ್ವಿತೀಯ, ತೃತೀಯ ಬಂದವರಿಗೆ ಪುಸ್ತಕವನ್ನು ಬಹುಮಾನ ರೂಪವಾಗಿ ನೀಡಲಾಯಿತು. ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಶಿವರಾಮ ಉತ್ರಂಬೆ ವಹಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಂದ ಪ್ರಾರ್ಥನಾ ಗೀತೆ ,ಭಾಷಣ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಎಲ್ಲರನ್ನೂ ಸ್ವಾಗತಿಸಿ ದಿನದ ವಿಶೇಷತೆ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹೊಂಬೆಳಕು ತಂಡದ ಗೌರವಾಧ್ಯಕ್ಷರಾದ ಶ್ರೀ ಉದಯಕುಮಾರ್ ದೇರಪಜ್ಜನಮನೆ ಮಾತನಾಡಿ ಪ್ರಾರಂಭದಲ್ಲಿ ಶಾಲೆ ಬೆಳೆದು ಬಂದ ದಾರಿ, ತಮ್ಮ ಮನೆತನದವರು ನೀಡಿದ ಕೊಡುಗೆ ಬಗ್ಗೆ ಸ್ಮರಿಸಿದರು. ವೇದಿಕೆಯಲ್ಲಿ ಎಸ್ ಡಿ ಎಮ್ ಸಿ ಸದಸ್ಯರಾದ ಶ್ರೀ ಯುವರಾಜ ತಂಟೆಪ್ಪಾಡಿ, ಶ್ರೀಮತಿ ವನಿತಾ ಬಾಲಕೃಷ್ಣ, ಹೊಂಬೆಳಕು ತಂಡದ ಸದಸ್ಯರಾದ ಶ್ರೀ ದಿನೇಶ್ ಹಾಲೆಮಜಲು, ಶ್ರೀ ನಿತಿನ್ ದೇರಪ್ಪಜ್ಜನಮನೆ ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀ ಮಹೇಶ್ ಕೆಕೆ ಇವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರುರವರ ಜೀವನ ಚರಿತ್ರೆ, ಅವರು ನಡೆದು ಬಂದ ದಾರಿ, ಶಿಕ್ಷಣ, ಸ್ವಾತಂತ್ರ ಹೋರಾಟದಲ್ಲಿ ಅವರ ಪಾತ್ರ , ಸಮಾಜಕ್ಕೆ ಅವರು ನೀಡಿರುವ ಕೊಡುಗೆ ಮುಂತಾದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ವನಜಾಕ್ಷಿ ಎಂ ಇವರು ಕಾರ್ಯಕ್ರಮ ನಿರ್ವಹಿಸಿ, ದಿನದ ಮಹತ್ವದ ಬಗ್ಗೆ ಹಾಡೊಂದನ್ನು ಹಾಡಿ ಎಲ್ಲರ ಮನ ರಂಜಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಸುಮನ ಹೊಂಬೆಳಕು ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಜ್ಞಾನದೀಪ ಶಿಕ್ಷಕಿ ಶ್ರೀಮತಿ ಸವಿತಾ ಇವರು ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಓದಿ ಹೇಳಿದರು. ಕಾರ್ಯಕ್ರಮದ ಕೊನೆಗೆ ಪ್ರಶಿಕ್ಷಣಾರ್ಥಿ ಶ್ರೀಮತಿ ಮೋಕ್ಷ ಇವರು ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು. ಈ ದಿನ ವಿಶೇಷ ಭೋಜನ ನೀಡಲಾಯಿತು. ಶ್ರೀ ಮಹೇಶ್ ಕೆಕೆ ತಮ್ಮ ವಿವಾಹ ವಾರ್ಷಿಕೋತ್ಸವದ ಅಂಗವಾಗಿ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು. ಕೊನೆಗೆ ಪ್ರಾರ್ಥನೆ ಗೀತೆಯೊಂದಿಗೆ ದಿನದ ಕಾರ್ಯಕ್ರಮಕ್ಕೆ ಮುಕ್ತಾಯ ಹೇಳಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading