

ಮಂಗಳೂರಿನಲ್ಲಿ ನ. 16 ರಂದು ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಸನ್ಮಾನಿಸಿ ಗೌರವಿಸಲಾಯಿತು. ಶತಮಾನ ಪೂರೈಸಿದ ಗುತ್ತಿಗಾರು ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಗೌರವ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
