Ad Widget

ಜಟ್ಟಿಪಳ್ಳ: ಬಿರ್ಸ ಮುಂಡ ಅವರ ಜನ್ಮದಿನಾಚರಣೆಯ ಅಂಗವಾಗಿ ಜನಜಾತಿಯ ಗೌರವ ದಿವಸ್ ಕಾರ್ಯಕ್ರಮ

. . . . . . . . .

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ,ಸಂಸ್ಥೆ ಯ ಬೆಳ್ಳಿ ಹಬ್ಬ ಆಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಿರ್ಸ ಮುಂಡ ಅವರ ಜನ್ಮದಿನಾಚರಣೆ ಯ ಅಂಗವಾಗಿ ಜನಜಾತಿಯ ಗೌರವ ದಿವಸ ಕಾರ್ಯಕ್ರಮ ವು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು. ಕಟ್ಟಡ ಸಮಿತಿ ಅಧ್ಯಕ್ಷರಾದ ರಘುನಾಥ ಜಟ್ಟಿಪಳ್ಳ ದೀಪ ಬೆಳಗಿಸಿ ಉದ್ಘಾಟಿ ಸಿದರು. ಮತ್ತು ಬಿರ್ಸ ಮುಂಡನ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು.

. . . . . . .

ಮಹಿಳಾ ಮಂಡಲದ ಅಧ್ಯಕ್ಷರಾದ ಚಿತ್ರಲೇಖ ಮಡಪ್ಪಾಡಿಯವರು ಸಭಾಧ್ಯಕ್ಷತೆ ವಹಿಸಿದ್ದರು. ನೆಹರೂ ಸ್ಮಾರಕ ಕಾಲೇಜಿನ ಉಪನ್ಯಾಸಕರಾದ ಕುಲದೀಪ್ ಪೆಲ್ತಡ್ಕ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ ಮುಖ್ಯ ಅತಿಥಿ ಯಾಗಿ ಆಗಮಿಸಿದ್ದರು. ಮಹಿಳಾ ಮಂಡಲದ ಗೌರವಾಧ್ಯಕ್ಷೆ ಚಂದ್ರಾಕ್ಷಿ ಜೆ ರೈ ಸ್ವಾಗತಿಸಿದರು‌. ಕಾರ್ಯಕ್ರಮ ದಲ್ಲಿ ಸುಶೀಲಾ ಚಂದ್ರಶೇಖರ ಪ್ರಾರ್ಥಿಸಿದರು. ಖಜಾಂಚಿ ಸವಿತಾ ಲಕ್ಷ್ಮಣ್ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಅಲ್ಲದೆ ಜನಜಾತಿಯ ಗೌರವ ದಿವಸದ ಜಾಥಾ ನಡೆಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading