
ಸಂಪಾಜೆ ಗಡಿಕಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ರಮ್ಲ ಹನೀಫ್ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆ ಯನ್ನು ಸಾಮಾಜಿಕ ಕಾರ್ಯಕರ್ತರಾದ ಶ್ರೀಮತಿ ಚಂದ್ರಾವತಿ ಕಲುಮೆ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಲ್ಲಾ ಮಕ್ಕಳಿಗೆ ಶ್ರೀಮತಿ ಚಂದ್ರಾವತಿ ಕಲುಮೆ ಹಾಗೂ ವೆಂಕಪ್ಪ ದಂಪತಿಗಳು ಬ್ಯಾಗ್ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಕೆ. ಹನೀಫ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಶ್ರೀಮತಿ ಸುಂದರಿ ಮುಂಡಡ್ಕ, ಸದಸ್ಯರಾದ ರಜನಿ ಶರತ್, ಅಂಗನವಾಡಿ ಕಾರ್ಯಕರ್ತೆ ಶಿಲಾವತಿ ಉಪಸ್ಥಿತರಿದ್ದರು. ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.